ಸಮಗ್ರ ಸುದ್ದಿ

ನಾಳೆಯಿಂದ ವಿಧಾನ ಮಂಡಲ ವಿಶೇಷ ಅಧಿವೇಶನ :ಬರ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ

Share

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 23 ರವರೆಗೆ ಮೂರು ದಿನಗಳ ವಿಶೇಷ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಕಸ್ತೂರಿ ರಂಗನ್ ವರದಿ, ಬರ ಪರಿಸ್ಥಿತಿ ಕುರಿತಂತೆ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಈ ಎರಡೂ ವಿಷಯಗಳನ್ನು ಚರ್ಚಿಸಬೇಕಾಗಿತ್ತು. ಆದರೆ, ಗದ್ದಲ ಹಾಗೂ ಪ್ರತಿಪಕ್ಷಗಳ ಪ್ರತಿಭಟನೆಯ ಕಾರಣ, ಈ ವಿಷಯಗಳ ಚರ್ಚೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ, ಸರ್ಕಾರ, ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ.

ಕಸ್ತೂರಿ ರಂಗನ್ ಅವರ ವರದಿಯಲ್ಲಿ, ಪಶ್ಚಿಮಘಟ್ಟ ವ್ಯಾಪ್ತಿಯ 1 ಸಾವಿರದ 449 ಗ್ರಾಮಗಳನ್ನು, ಪರಿಸರ ಸೂಕ್ಷ್ಮ ವಲಯಕ್ಕೆ ಸೇರ್ಪಡೆ ಮಾಡಲಾಗಿದೆ. ಈ ಕುರಿತು, ಕೇಂದ್ರ ಸರ್ಕಾರ, ಕರಡು ಅಧಿಸೂಚನೆಯನ್ನು ಸಹ ಹೊರಡಿಸಿದೆ.

ಈ ಕ್ರಮದಿಂದ, ಪಶ್ಚಿಮಘಟ್ಟ ವ್ಯಾಪ್ತಿಯ ಜನರ ಬದುಕಿನ ಮೇಲೆ ಪರಿಣಾಮ ಉಂಟಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ, ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ, ಅಧಿಸೂಚನೆಯ ವಿರುದ್ಧ ನಿರ್ಣಯ ಮಂಡಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ.


Share

You cannot copy content of this page