ಗುಜರಾತ್: ಹಿರಿಯ ನಟ ಅನಂತನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 2024ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.
ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್‌ನಾಗ್ ಅವರು ಪ್ರಶಸ್ತಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಕರ್ನಾಟಕ ನನ್ನ ಕರ್ಮ ಭೂಮಿಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಕನಕದಾಸರ ಕೀರ್ತನೆ ಉಲ್ಲೇಖಿಸಿದ ಅವರು, ಎಲ್ಲರೂ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಎಂದು ತಮ್ಮ ನಟನಾ ಕ್ಷೇತ್ರದ ಒಲವಿನ ಬಗ್ಗೆ ಪ್ರಸ್ತಾಪಿಸಿದರು.
ಈ ಪ್ರಶಸ್ತಿಯ ಹಿಂದೆ ಹಲವರ ಶ್ರಮವಿದ್ದು, ತಮ್ಮೊಂದಿಗೆ ಅಭಿನಯಿಸಿದ್ದ ನಟರು, ನಿರ್ದೇಶಕರು ಹಾಗೂ ಕಾರ್ಮಿಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅನಂತ್ ನಾಗ್ ಈ ಹಿಂದೆ ಪದ್ಮಭೂಷಣ ಪ್ರಶಸ್ತಿಗೂ ಭಾಜನರಾಗಿದ್ದರು. ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ವಿವಿಧ ಭಾಷೆಗಳಲ್ಲಿ ನಟಿಸಿದ್ದಾರೆ.
ಇದೇ ಸಮಾರಂಭದಲ್ಲಿ ಕನ್ನಡದ ಮಿಥ್ಯ ಚಿತ್ರ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಈ ಚಿತ್ರದ ನಟನೆಗಾಗಿ ರೂಪಶ್ರಿ ವರ್ಕಾಡಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಿಥ್ಯ ಸಿನಿಮಾದಲ್ಲಿನ ನಟನೆಗಾಗಿ ಅತ್ಯುತ್ತಮ ಬಾಲನಟ ಪ್ರಶಸ್ತಿಯನ್ನು ಅತೀಶ್ ಎಸ್. ಶೆಟ್ಟಿ ಪಡೆದುಕೊಂಡಿದ್ದಾರೆ. ಶಿವಧ್ವಜ್ ಶೆಟ್ಟಿ ನಿರ್ದೇಶನದ ಇಂಬು ಅತ್ಯುತ್ತಮ ತುಳು ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.
ಅನಂತನಾಗ್ ಗೆ ಫಾಲ್ಕೆ ಪ್ರಶಸ್ತಿ; ಕನ್ನಡ ಚಿತ್ರರಂಗದ ಹಿರಿಯ ಚೇತನಕ್ಕೆ ಸಂದ ಗೌರವ;ಪ್ರಲ್ಹಾದ ಜೋಶಿ
ನವದೆಹಲಿ: ಐದು ದಶಕಗಳ ಕಾಲ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ಹಿರಿಯ ನಟ ಅನಂತನಾಗ್ ಅವರಿಗೆ “ದಾದಾಸಾಹೇಬ್ ಫಾಲ್ಕೆ” ಪ್ರಶಸ್ತಿ ಸೂಕ್ತ ಗೌರವ ತಂದುಕೊಟ್ಟಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅಭಿನಂದಿಸಿದ್ದಾರೆ.
‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪುರಸ್ಕೃತರಾದ ಅನಂತನಾಗ್ ಕನ್ನಡ ಚಿತ್ರರಂಗದ ಧೀಮಂತ ನಟ ಮಾತ್ರವಲ್ಲ, ಕಲಾ ಜಗತ್ತಿನ ಹಿರಿಯ ಚೇತನ ಎಂದು ಬಣ್ಣಿಸಿದ ಜೋಶಿ ಬಣ್ಣಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಂತನಾಗ್ ಅವರು ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ.
ತಮ್ಮ ಅದ್ಭುತ ನಟನೆ, ವಿಶಿಷ್ಟ ವ್ಯಕ್ತಿತ್ವ ಹಾಗೂ ವೈವಿಧ್ಯಮಯ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಅನಂತನಾಗ್ ಅಪಾರ ಕೊಡುಗೆ ನೀಡಿದ್ದಾರೆ. ಚಿತ್ರರಂಗದಲ್ಲಿ ಅವರು ಸಲ್ಲಿಸಿದ ನಿರಂತರ ಸೇವೆಗೆ ಸಂದ ಗೌರವವಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಿಸಿದ್ದಾರೆ
