ಸಮಗ್ರ ಸುದ್ದಿ

ವಿದ್ಯಾರ್ಥಿ ನಿಲಯಕ್ಕೆ ಹೊಸ ಕಟ್ಟಡ- ಸಚಿವ ಶಿವರಾಜ ಎಸ್ ತಂಗಡಗಿ

Share

ಬೆಳಗಾವಿ, ಸುವರ್ಣ ವಿಧಾನಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ವಿದ್ಯಾರ್ಥಿ ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುವಂತೆ ಕೋರಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ ಕೈಗೊಳ್ಳಲಾಗಿದೆ.

ಈಗಾಗಲೇ 2.50ಕೋಟಿ ರೂ.ಗಳನ್ನು ಹಾಸನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು ಆದಷ್ಟು ಶೀಘ್ರವಾಗಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.


Share

You cannot copy content of this page