ಸಮಗ್ರ ಸುದ್ದಿ

ಗ್ರಾಹಕರಿಗೆ ಸಿಹಿ ಸುದ್ದಿ; ರಜಾ ದಿನ ಭಾನುವಾರ ಇರಲಿದೆ ಬ್ಯಾಂಕಿಂಗ್ ಸೇವೆ; ಪ್ರಲ್ಹಾದ ಜೋಶಿ| ಸೆ.27ರಂದು ಬ್ಯಾಂಕ್ ಕಾರ್ಯಾರಂಭಕ್ಕೆ ರಿಸರ್ವ್ ಬ್ಯಾಂಕ್ ಅನುಮತಿ

Share

ನವದೆಹಲಿ: ಬ್ಯಾಂಕ್ ಯುನಿಯನ್ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರ ಪೂರ್ಣಾವಧಿ ಕಾರ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಸೆಪ್ಟೆಂಬರ್ 28ರಿಂದ 30ರವರೆಗೆ ದೇಶಾದ್ಯಂತ ಮೂರು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್’ (UFBU ಕರೆ ನೀಡಿದೆ. ಹೀಗಾಗಿ ಗ್ರಾಹಕರಿಗೆ ಆಗುವ ಅಡೆತಡೆ ತಪ್ಪಿಸಲೆಂದು ಭಾನುವಾರ ರಜಾ ದಿನವಾದರೂ ಅಂದು ಎಂದಿನಂತೆ ಬ್ಯಾಂಕ್ ಗಳು ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ: ಸಾರ್ವಜನಿಕರ ಬ್ಯಾಂಕಿಂಗ್ ಅಗತ್ಯಗಳಿಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಗ್ರಾಹಕರ ಸೇವೆಗಾಗಿ ಸೆ.27ರ ಭಾನುವಾರ ಸಾರ್ವತ್ರಿಕ ವಲಯದ ಎಲ್ಲಾ ಬ್ಯಾಂಕ್‌ಗಳು ಪೂರ್ಣಾ ಸಮಯ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ರಿಸರ್ವ್ ಬ್ಯಾಂಕ್ ಅನುಮತಿ: ಬ್ಯಾಂಕ್ ಗಳ ಯುನಿಯನ್ ಮುಷ್ಕರದ ಕಾರಣ ಗ್ರಾಹಕರ ಅನುಕೂಲಕ್ಕಾಗಿ ಸೆ.27ರಂದು ಬ್ಯಾಂಕುಗಳು ಕಾರ್ಯ ನಿರ್ವಹಣೆಗೆ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ದೀರ್ಘ ಕಾಲದವರೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಸಾರ್ವಜನಿಕ ವಲಯದ ಎಲ್ಲಾ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೆಪ್ಟೆಂಬರ್ ಭಾನುವಾರ ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದಿದ್ದಾರೆ ಜೋಶಿ.

#ಬ್ಯಾಂಕ್, ಎಟಿಎಂ, ಕರೆನ್ಸಿ ಚೆಸ್ಟ್ ಓಪನ್:* ರಿಸರ್ವ್ ಬ್ಯಾಂಕ್ ಅನುಮತಿಯಂತೆ ಸೆ.27ರಂದು ಎಲ್ಲಾ ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂ-ಸಂಪರ್ಕಿತ ಶಾಖೆಗಳು ಮತ್ತು ಕರೆನ್ಸಿ ಚೆಸ್ಟ್‌ಗಳು (ನಗದು ಸಂಗ್ರಹಣಾ ಕೇಂದ್ರಗಳು) ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮುಷ್ಕರ ಮುಂದೂಡಲು ಮನವಿ: ಸೆ.28ರಿಂದ ಮೂರು ದಿನ ನಡೆಸಲು ಉದ್ದೇಶಿಸಿರುವ ಮುಷ್ಕರವನ್ನು ಮುಂದೂಡುವಂತೆ ಸರ್ಕಾರ ಮತ್ತು ಬ್ಯಾಂಕ್ ಆಡಳಿತ ಮಂಡಳಿಗಳು ಸಂಘಟನೆಗಳಿಗೆ ಮನವಿ ಮಾಡಿವೆ ಎಂದೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.


Share

You cannot copy content of this page