ಬೆಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2012ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ.
ವಿಶೇಷ ತನಿಖಾ ತಂಡದಲ್ಲಿ ಎನ್. ಶಶಿಕುಮಾರ್, ಐಪಿಎಸ್ (ಮುಖ್ಯಸ್ಥರು), ಸಿ.ಕೆ. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್, ಶ್ರೀಮತಿ ನಿಖಾ ಜೇಮ್ಸ್, ಐಪಿಎಸ್, ಲೋಕೆಶ್ ಜಗಲಾಸರ್, ಐಪಿಎಸ್ ಹಾಗೂ ಡಾ. ವೆಂಕಟೇಶ್ ಪ್ರಸನ್ನ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಕರಣದ ಮರುತನಿಖೆ ನಡೆಯಲಿದ್ದು,ವಿಶೇಷ ತನಿಖಾ ತಂಡವು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ, ಕಾನೂನು ಪ್ರಕಾರ ಸಂಬಂಧಪಟ್ಟ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
