ಸಮಗ್ರ ಸುದ್ದಿ

ಮೈಸೂರು ಪೇಟ ತೊಡಿಸಿ ರಾಜ್ಯಪಾಲರಿಗೆ ದಸರಾ ಮಹೋತ್ಸವಕ್ಕೆ ಗೌರವದಿಂದ ಆಹ್ವಾನಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Share

ಬೆಂಗಳೂರು:ಕರ್ನಾಟಕದ ಸಾಂಸ್ಕೃತಿಕ ವೈಭವದ ಸಂಕೇತವಾಗಿರುವ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದರು.

ಇಂದು ಬೆಂಗಳೂರಿನ ಲೋಕಭವನದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ನಿಯೋಗದೊಂದಿಗೆ ರಾಜ್ಯಪಾಲರನ್ನು ಭೇಟಿಯಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನ ಸಾಂಪ್ರದಾಯಿಕ ಶೈಲಿಯಲ್ಲಿ ಮೈಸೂರು ಪೇಟ ತೊಡಿಸಿ, ಹೂ ಗುಚ್ಛ ನೀಡಿ ಗೌರವಪೂರ್ವಕವಾಗಿ ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿದರು.

ಆಹ್ವಾನವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ ರಾಜ್ಯಪಾಲರು, ನಾಡಹಬ್ಬ ದಸರಾ ಮಹೋತ್ಸವವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಉಪಸ್ಥಿತರಿದ್ದರು.


Share

You cannot copy content of this page