ಸಮಗ್ರ ಸುದ್ದಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಾ. ಜಿ. ಪರಮೇಶ್ವರ; ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆ

Share

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ನಿನ್ನೆ ನವದೆಹಲಿಯ 10 ಜನಪಥ್ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜನಪರ ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವುದು ಹಾಗೂ ಸರ್ಕಾರದ ಯೋಜನೆಗಳು ಮತ್ತು ಸೇವೆಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿ, ಸಲಹೆಗಳನ್ನು ಪಡೆದುಕೊಂಡರು.

ಪಕ್ಷದ ಮಾರ್ಗದರ್ಶನ ಮತ್ತು ಜನರ ವಿಶ್ವಾಸದೊಂದಿಗೆ ಕರ್ನಾಟಕದ ಅಭಿವೃದ್ಧಿಗೆ ವೇಗ ನೀಡುವುದು, ಸಾಮಾಜಿಕ ನ್ಯಾಯ ಮತ್ತು ಜನಕಲ್ಯಾಣಕ್ಕೆ ಆದ್ಯತೆ ನೀಡುತ್ತಾ ಆಡಳಿತವನ್ನು ಮತ್ತಷ್ಟು ಬಲಪಡಿಸುವುದು ಚರ್ಚೆಯ ಪ್ರಮುಖ ಅಂಶವಾಗಿತ್ತು.


Share

You cannot copy content of this page