ಸಮಗ್ರ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Share

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿದರು.

ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಮೈಸೂರು ಜಿಲ್ಲಾಡಳಿತದ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು, ವಿವಿಧ ಕಾರ್ಯಕ್ರಮಗಳ ಆಯೋಜನೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ಸೌಹಾರ್ದಯುತವಾಗಿ ಚರ್ಚಿಸಿದರು.

ದಸರಾ ಮಹೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವೈಭವದಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಮೈಸೂರು ಜಿಲ್ಲಾಡಳಿತದ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page