ಬೆಂಗಳೂರು: ಕೆವಿಸಿ ಪ್ರೊಡಕ್ಷನ್ ಹಾಗೂ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಸಮೃದ್ಧಿ ಮಂಜುನಾಥ್ ಅವರು ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರ ಅಕ್ಟೋಬರ್ 16 ರಂದು ಬಿಡುಗಡೆಯಾಗಬೇಕಿತ್ತು. ನವೆಂಬರ್ 20ಕ್ಕೆ ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ.
ಹೊಸತಂಡದ “ಪ್ರೇಮದ ಊರಲಿ” ಚಿತ್ರ ಎಲ್ಲಾ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಕ್ಟೋಬರ್ 16 ರಂದು ನಮ್ಮ ಚಿತ್ರ ಬಿಡುಗಡೆಯಾದರೆ ಚಿತ್ರಮಂದಿರಗಳ ಸಮಸ್ಯೆ ಎದುರಾಗಲಿದೆ. ಕನ್ನಡ ಚಿತ್ರವೊಂದು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಎಲ್ಲಾ ಕನ್ನಡಿಗರಿಗೂ ಹೆಮ್ಮೆಯ ವಿಷಯ. ಹಾಗಾಗಿ ನಮ್ಮ ಚಿತ್ರದ ಬಿಡುಗಡೆಯನ್ನು ನವೆಂಬರ್ 20 ಕ್ಕೆ ಮುಂದೂಡಿರುವುದಾಗಿ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಹಾಗೂ ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ತಿಳಿಸಿದ್ದಾರೆ.
