ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದ್ದು, ಇಂದು ಚಾಮುಂಡಿ ಬೆಟ್ಟದಲ್ಲಿ ಕೊಪ್ಪಳದ ಶ್ರೀ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಿದರು.
ನಂದಿಧ್ವಜಕ್ಕೆ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ, ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ, ತಾಯಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು.
ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಶಿವರಾಜ ತಂಗಡಗಿ, ಪುಟ್ಟರಂಗಶೆಟ್ಟಿ, ಈಶ್ವರ್ ಖಂಡ್ರೆ, ಬಸವಂತಪ್ಪ, ಅಜಯ್ ಸಿಂಗ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಸಚಿವರು, ಸಂಸದರಾದ ಸುನಿಲ್ ಬೋಸ್, ಶಾಸಕರಾದ ಜಿ.ಟಿ. ದೇವೇಗೌಡ, ಎಚ್.ಸಿ. ಮಹದೇವಪ್ಪ, ವೆಂಕಟೇಶ್, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ರವಿಶಂಕರ್, ದರ್ಶನ್ ಧ್ರುವನಾರಾಯಣ, ಹರೀಶ್ ಗೌಡ, ಕೃಷ್ಣಮೂರ್ತಿ ಸೇರಿದಂತೆ ಹಲವು ಶಾಸಕರು, ವಿಧಾನ ಪರಿಷತ್ ಸದಸ್ಯರಾದ ಡಾ. ಟಿ. ತಿಮ್ಮಯ್ಯ, ಶಿವಕುಮಾರ್, ರಘು ಕೌಟಿಲ್ಯ, ದಿನೇಶ್ ಗೂಳಿಗೌಡ, ವಿವಿಧ ನಿಗಮಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
