ಶಿಕ್ಷಣ / ಉದ್ಯೋಗ

2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1: ನೋಂದಣಿಗೆ ಅರ್ಜಿ ಆಹ್ವಾನ

Share

ಬೆಂಗಳೂರು:2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ಎಲ್ಲಾ ವಿಧದ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಅರ್ಜಿಗಳನ್ನು ಆಹ್ವಾನಿಸಿದೆ.

ನೋಂದಣಿ ಪ್ರಕ್ರಿಯೆ:
ಶಾಲಾ ವಿದ್ಯಾರ್ಥಿಗಳನ್ನು ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ಶಾಲಾ ಲಾಗಿನ್ ಮೂಲಕ ನೋಂದಾಯಿಸಬೇಕು. ಖಾಸಗಿ ಅಭ್ಯರ್ಥಿಗಳು, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು ನೇರವಾಗಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ವಿವರಗಳನ್ನು ಮಂಡಳಿಯ ಅಧಿಕೃತ ಜಾಲತಾಣವಾದ https://kseab.karnataka.gov.in ಮೂಲಕ ದಿನಾಂಕ 2026 ನೇ ಅಕ್ಟೋಬರ್ 09 ರಿಂದ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share

You cannot copy content of this page