ಸಮಗ್ರ ಸುದ್ದಿ

ಪ್ರಗತಿಪಥ: 2248 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿ – ಈಶ್ವರಖಂಡ್ರೆ

Share

ಬೆಂಗಳೂರು: ರಾಜ್ಯದ 202 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಪಥ ಯೋಜನೆ ಅಡಿಯಲ್ಲಿ 5400 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಈ ಪೈಕಿ ಮೊದಲ ಹಂತದಲ್ಲಿ 2248 ಕಿ.ಮೀ. ಕಾಮಗಾರಿ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿಂದು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, 1692 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿರುವ 562 ರಸ್ತೆಗಳ ಕಾಮಗಾರಿಯಲ್ಲಿ ಗುಣಮಟ್ಟದ ಖಾತ್ರಿಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಏಷ್ಯಾ ಅಭಿವೃದ್ಧಿ ಬ್ಯಾಂಕ್ ನೆರವಿನ ಈ ಯೋಜನೆಯಲ್ಲಿ ಬ್ಯಾಂಕ್ ಶೇ.70ರಷ್ಟು ಆರ್ಥಿಕ ನೆರವು ಒದಗಿಸುತ್ತಿದ್ದು, ರಾಜ್ಯ ಸರ್ಕಾರ ಶೇ.30ರಷ್ಟು ಭರಿಸುತ್ತಿದೆ. ಯೋಜನೆಯ ಮೊದಲ ಹಂತಕ್ಕೆ ನವೆಂಬರ್ ಮೊದಲ ವಾರದಲ್ಲಿ ಚಾಲನೆ ನೀಡಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆಯೂ ತಿಳಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕ ದೇವರಾಜೇಗೌಡ, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖ್ಯ ಎಂಜಿನಿಯರ್ ಮುರಳೀಧರ್ ಮತ್ತಿತರರು ಪಾಲ್ಗೊಂಡಿದ್ದರು.


Share

You cannot copy content of this page