ಸಮಗ್ರ ಸುದ್ದಿ

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ

Share

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.

ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.


Share

You cannot copy content of this page