ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಅಕ್ಟೋಬರ್ 23 ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹ ಮತದಾರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ಸಂಬಂಧಪಟ್ಟ ಕ್ಷೇತ್ರಗಳ ಅರ್ಹ ಪದವೀಧರ ಹಾಗೂ ಶಿಕ್ಷಕ ಮತದಾರರಿಗೆ ಮಾತ್ರ ಮತ ಚಲಾಯಿಸಲು ಅನುಕೂಲವಾಗುವಂತೆ ಈ ರಜೆ ನೀಡಲಾಗಿದೆ.
ಮತದಾರರು ಸೂಕ್ತ ಹಾಗೂ ಅಧಿಕಾರವುಳ್ಳ ಪ್ರಾಧಿಕಾರಗಳಿಂದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
