ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್; ಆತ್ಮೀಯವಾಗಿ ಸ್ವಾಗತಿಸಿದ ಸಚಿವ ಕೃಷ್ಣಭೈರೇಗೌಡ

Share

ಬೆಂಗಳೂರು:ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ನಿಯೋಗವು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿನ ಪ್ರವಾಸ ಕೈಗೊಂಡಿದ್ದು, ಇಂದು ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಪೋಲೆಂಡ್ ಪ್ರಧಾನಿ ಮತ್ತು ಅವರ ನಿಯೋಗವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣಭೈರೇಗೌಡ ಅವರು ಹೂ ಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳಾದ ಕೆ.ಜಿ. ಜಗದೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page