ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ವತಿಯಿಂದ 2026ರ ಡಿಸೆಂಬರ್ 23 ರಿಂದ 25 ರವರೆಗೆ “ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ” ಎಂಬ ಧ್ವೇಯೋದ್ದೇಶದೊಂದಿಗೆ ಬಾಗಲಕೋಟೆಯಲ್ಲಿ ತೋಟಗಾರಿಕೆ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಮೇಳದ ಪ್ರಯುಕ್ತ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ರಾಜ್ಯದ 25 ಜಿಲ್ಲೆಗಳಲ್ಲಿ, ಪ್ರತಿ ಜಿಲ್ಲೆಗೆ ಒಬ್ಬರಂತೆ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆಯನ್ನು ಆಯ್ಕೆ ಮಾಡಿ “ಶ್ರೇಷ್ಠ ತೋಟಗಾರಿಕಾ ರೈತ / ರೈತ ಮಹಿಳೆ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ಮತ್ತು ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.uhsbagalkot.karnataka.gov.in ಮೂಲಕ ಅಥವಾ ಆಯಾ ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ವಿವಿ ಅಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ವಿವರಗಳೊಂದಿಗೆ ಅಕ್ಟೋಬರ್ 30, 2026 ರೊಳಗಾಗಿ ಆಯಾ ಜಿಲ್ಲೆಯ ಸಂಬಂಧಪಟ್ಟ ತೋವಿವಿ ಕಚೇರಿಗೆ ಸಲ್ಲಿಸುವುದು.
ನಿಯಮಗಳು ಮತ್ತು ನಿಬಂಧನೆಗಳು:
ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳು ಅಥವಾ ICAR ಪ್ರಶಸ್ತಿಗಳನ್ನು ಪಡೆದಿರಬಾರದು.
ನಿಗದಿತ ಅರ್ಜಿ ನಮೂನೆಯಲ್ಲಿ ಸಂಪೂರ್ಣ ವಿವರಗಳನ್ನು ನೀಡಬೇಕು. ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ, ಶಾರ್ಟ್ಲಿಸ್ಟ್ (ಕಿರುಪಟ್ಟಿ) ಮಾಡಿದ ಮೂರು ಕ್ಷೇತ್ರಗಳಿಗೆ ಮಾತ್ರ ಸ್ಥಳ ಪರಿಶೀಲನೆ (ಕ್ಷೇತ್ರ ವೀಕ್ಷಣೆ) ಕೈಗೊಳ್ಳಲಿದೆ.
ಅಂತಿಮ ಆಯ್ಕೆಯು ವಿಶ್ವವಿದ್ಯಾಲಯದ ನಿಯಮಗಳು ಹಾಗೂ ಆಯ್ಕೆ ಸಮಿತಿಯ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಪ್ರಶಸ್ತಿ ಹಾಗೂ ಅರ್ಜಿ ಸಲ್ಲಿಕೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ತೋವಿವಿ ಬಾಗಲಕೋಟೆಯ ವಿಸ್ತರಣಾ ನಿರ್ದೇಶಕರಾದ ಡಾ. ವೆಂಕಟೇಶಲು, ಮೊ. 9480696381 / 08354-230101, ಸಹಾಯಕ ನಿರ್ದೇಶಕರಾದ ಡಾ. ದೀಪಾ ತೆರದಾಳ ಮೊ. 7899285785, ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶ್ರೀಪಾದ ವಿ. ಮೊ. 9448344103, ಶ್ರೀ ಎಮ್. ಎ. ವಾಸೀಮ್, ಮೊ. 7259793847, ಡಾ. ಶಶಿಧರ ದೊಡಮನಿ, ಮೊ. 7795674153, ಅಥವಾ ಸಹಾಯಕ ಆಡಳಿತಾಧಿಕಾರಿ ಶ್ರೀ ಪಿ. ಬಿ. ದೇಸೂರ, ಮೊ. 8884612692 ಹಾಗೂ ಇಮೇಲ್ ವಿಳಾಸ de@uhsbagalkot.edu.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
