ಸಮಗ್ರ ಸುದ್ದಿ

ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಚನ ಬೋಧನೆ

Share

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಿಸಲಾಗುತ್ತಿರುವ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಿಕಾಸ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದರು.

ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಹೊಣೆಗಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳಾದ ಪಂಕಜ್ ಕುಮಾರ್ ಪಾಂಡೆ, ಮನೋಜ್ ಕುಮಾರ್ ಮೀನಾ, ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವಾಲಯದ ನೌಕರರು ಉಪಸ್ಥಿತರಿದ್ದರು.


Share

You cannot copy content of this page