ಸಮಗ್ರ ಸುದ್ದಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ಆನ್‍ಲೈನ್‍ನಲ್ಲಿ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಣೆ

Share

ಬೆಂಗಳೂರು, ನ.11: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಆನ್ ಲೈನ್ (online) ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು 2025 ರ ನವೆಂಬರ್ 10 ರವರೆಗೆ ವಿಸ್ತರಿಸಲಾಗಿತ್ತು.

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್ ಲೈನ್ ಲಿಂಕ್ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ಅಂತಿಮವಾಗಿ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಸಮೀಕ್ಷೆಯಲ್ಲಿ ಇದುವರೆಗೂ ಪಾಲ್ಗೊಳ್ಳದೇ ಇರುವವರು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770004 ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share

You cannot copy content of this page