ಸಮಗ್ರ ಸುದ್ದಿ

ನವೆಂಬರ್ 19ಕ್ಕೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಚಿವ ಶಿವರಾಜ್ ತಂಗಡಗಿ

Share

ಬೆಂಗಳೂರು: ಈ ಬಾರಿ ಸರ್ಕಾರ ನೀಡುವ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಪ್ರಶಸ್ತಿಗೆ ಹಿರಿಯ ನಟರಾದ ಡಾ.ವಿಷ್ಣುವರ್ಧನ್‌ ಮತ್ತು ಬಿ. ಸರೋಜಾದೇವಿ ಅವರು ಭಾಜನರಾಗಿದ್ದು, ಇವರಿಗೆ ನ.19ರಂದು ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದರು.‌

ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದರು.

ಅಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲಿ ಇಬ್ಬರೂ ಮಹನೀಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರದಾನ ಮಾಡಲಿದ್ದಾರೆ. ಇದಕ್ಕೆ ರಜಿನಿಕಾಂತ್‌ ಹಾಗೂ ವಿಷ್ಣುವರ್ಧನ್‌ ಅವರೊಂದಿಗೆ ಹೆಚ್ಚಿನ ಚಿತ್ರಗಳಲ್ಲಿ ನಟಿಸಿರುವ ಸುಹಾನಿಸಿ ಅಥವಾ ಲಕ್ಷ್ಮೀ ಅವರನ್ನು ಆಹ್ವಾನಿಸಲೂ ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.


Share

You cannot copy content of this page