ಸಮಗ್ರ ಸುದ್ದಿ

ಮುಂದಿನ ಚುನಾವಣೆಯಲ್ಲಿ ಎನ್‍ಡಿಎ ಸರಕಾರ: ಬಿ.ಎಸ್. ಯಡಿಯೂರಪ್ಪ

Share

ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಷಡ್ಯಂತ್ರ, ಕುತಂತ್ರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಪಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ” ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಷಡ್ಯಂತ್ರದ ವಿರುದ್ಧ ಬಿಜೆಪಿ ಆಂದೋಲನ ನಡೆಸುತ್ತಿದೆ ಎಂದು ತಿಳಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಸೇರಿ ರಾಜ್ಯದಲ್ಲಿ ಎನ್‍ಡಿಎ ಸರಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ನುಡಿದರು.

ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಹಾಲಿನ ದರ ಸೇರಿ ನಿತ್ಯ ವಸ್ತುಗಳ ಬೆಲೆ ಏರಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು. ಜನರು ಉಸಿರುಗಟ್ಟುವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದರು. ಪಕ್ಷವನ್ನು ಬಲಪಡಿಸಿ, ಕರ್ನಾಟಕದಲ್ಲಿ ಬಹುಮತದ ಸರಕಾರ ತರುವಂತೆ ಮನವಿ ಮಾಡಿದರು.


Share

You cannot copy content of this page