ಸಮಗ್ರ ಸುದ್ದಿ

ಶಿವಮೊಗ್ಗ ಜಿಲ್ಲೆಯ ನಿವೇಶನ ಹಂಚಿಕೆ: ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ: ಸಚಿವ ಮಧು ಬಂಗಾರಪ್ಪ

Share

ಬೆಂಗಳೂರು: ವಸತಿ ಇಲಾಖೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ವಸತಿ ಸಚಿವ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರೊಂದಿಗೆ ಇಂದು ಬೆಂಗಳೂರಿನ ಗೃಹ ಮಂಡಳಿ ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ನಿವೇಶನ ಹಂಚಿಕೆ ವಿಳಂಬವಾಗಿರುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, “ಸಮಸ್ಯೆಗೆ ಸರ್ಕಾರದ ಮಟ್ಟದಲ್ಲಿ ಯಾವ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಕುರಿತು ಚರ್ಚಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಿರುವ ಮಾರ್ಗಗಳನ್ನು ಪರಿಶೀಲಿಸಿ, ಶೀಘ್ರ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ವಸತಿ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, “ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಬಾರದು. ಸರ್ಕಾರದ ಮಟ್ಟದಲ್ಲಿ ಶಿವಮೊಗ್ಗ ವಿಚಾರವನ್ನು ಚರ್ಚಿಸಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ, ಗೃಹ ಮಂಡಳಿ ಆಯುಕ್ತರಾದ ದಯಾನಂದ, ಭಾರತ್ ಜೋಡೋ ಶಿವಮೊಗ್ಗ ಜಿಲ್ಲೆಯ ಸಮನ್ವಯ ಅಧಿಕಾರಿ ಟಿ ಡಿ ಗೀತೇಂದ್ರ, ಶಿವಮೊಗ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾದ ಎನ್. ರವಿಕುಮಾರ್, ದೇಶಾದ್ರಿ ಹೊಸಮನೆ, ನಾಗರಾಜ್ ಶೈನೈ, ಲಿಯಾ ಕಟ್, ಎನ್ ಮಂಜುನಾಥ್ , ಜಿಲ್ಲಾ ಕಾಂಗ್ರೆಸ್ ವಕ್ತಾರ ಜಿ ಡಿ ಮಂಜುನಾಥ್, ಭಾರತ್ ಜೋಡೋ ಶಿವಮೊಗ್ಗ ಜಿಲ್ಲೆಯ ಸಮನ್ವಯ ಅಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


Share

You cannot copy content of this page