ಸಮಗ್ರ ಸುದ್ದಿ

ಹಿರಿಯೂರು ಉಪ ಚುನಾವಣೆ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಟಿ.ರಘುಮೂರ್ತಿ ಸಮಾಲೋಚನೆ

Share

ಬೆಂಗಳೂರು: ಹಿರಿಯೂರು ಉಪ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಸಿದ್ಧತೆ ಆರಂಭಿಸಿದೆ.

ಈ ಸಂಬಂಧ ಈಗಾಗಲೇ ಹಲವಾರು ನಾಯಕರ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮಾಲೋಚನೆ ನಡೆಸಿದ್ದಾರೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಬುಧವಾರ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ದೀಪಾವಳಿ ತಿಳಿಸಿ, ಸೋನಿಯಾ ಗಾಂಧಿ ಅವರ ಆತ್ಮಕಥೆಯನ್ನು ಕಾಣಿಕೆಯಾಗಿ ನೀಡಿ ಶುಭಾಶಯ ಕೋರಿದರು. ಕಾಂಗ್ರೆಸ್ ಮುಖಂಡ ಎನ್. ಚಂದ್ರಪ್ಪ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಉಭಯ ನಾಯಕರು ಹಿರಿಯೂರು ವಿಧಾನಸಭೆ ಚುನಾವಣೆ ಸಂಬಂಧ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.

ಹಿರಿಯೂರು ವಿಧಾನಸಭೆ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿರುವುದರಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಸಲಹೆ-ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆಗೆ ಅತಿ ಶೀಘ್ರದಲ್ಲೇ ದಿನಾಂಕ ಪ್ರಕಟವಾಗುವ ನಿರೀಕ್ಷೆ ಇದೆ. ನಾವು ನಮ್ಮ ಸರ್ಕಾರದ ಯೋಜನೆಗಳು ಹಾಗೂ ಅನುಷ್ಠಾನಕ್ಕೆ ಬಂದಿರುವ ಯೋಜನೆಗಳನ್ನು ಜನರಿಗೆ ಪ್ರಚಾರ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಲಾಗಿದೆ.

ಡಿ. ಸುಧಾಕರ್‌ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಅತಿ ಶೀಘ್ರದಲ್ಲಿ ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ.


Share

You cannot copy content of this page